ಸಂಪ್ಯದಲ್ಲಿ ಅತ್ಯಾಧುನಿಕ ಸೌಕರ್ಯಗಳ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

0

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯ ಕಮ್ಮಾಡಿಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣಾ ಸಮಾರಂಭ ಸೆ.21ರಂದು ನಡೆಯಿತು. ಆಸ್ಪತ್ರೆಯನ್ನು ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಿದರು.


ಶಸ್ತ್ರ ಚಿಕಿತ್ಸಾ ವಿಭಾಗವನ್ನು ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಉದ್ಘಾಟಿಸಿದರು. ಶಾಸಕ ಅಶೊಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು.

ಆರ್ಯಾಪು ಗ್ರಾ.ಪಂ ಅಧ್ಯಕ್ಷೆ ಗೀತಾ ಆಂಬ್ಯುಲೆನ್ಸ್ ವಿಭಾಗಕ್ಕೆ ಚಾಲನೆ ನೀಡಿದರು. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, SKY ಹಾಸ್ಪಿಟಲ್ ಗ್ರೂಪ್ ಕಣ್ಣೂರು ಇದರ ಚೇರ್‌ಮೆನ್ ಡಾ.ವಾಸುದೇವನ್ ಟಿ.ಪಿ, ಬೆಂಗಳೂರು ಮಿಲನ್ ಪ್ಲೈವುಡ್‌ನ ಮಿಲಪ್ ಚಂದ್ ಜೈನ್, ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಶ್ಮೀರ್ ಕಮ್ಮಾಡಿ, ಕಾರ್ಯನಿರ್ವಾಹಕ ನಿರ್ದೇಶಕ ಆಶೀಶ್ ಕಮ್ಮಾಡಿ, ಮೆಡಿಕಲ್ ಡೈರೆಕ್ಟರ್ ಡಾ.ಅದ್ರಾಮ, ಅಸೋಸಿಯೇಟ್ ಜನರಲ್ ಡಾ.ವಿಶಾಲ್, ಜನರಲ್ ಪಿಸಿಶಿಯನ್ ಡಾ.ಸ್ವಾತಿ, ನಿರ್ಮಲಾ ವಾಸುದೇವನ್, ಡಾ.ಅನೀಸ್ ಅಬ್ದುಲ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಸಕಿ ಭಾಗೀರಥಿ ಮುರುಳ್ಯ ಭೇಟಿ:
ಲೋಕಾರ್ಪಣಾ ಸಮಾರಂಭದ ಸಭಾ ಕಾರ್ಯಕ್ರಮದ ಬಳಿಕ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು.
ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಕಾನೂನು ಸಲಹೆಗಾರ ಮೂಸಕುಂಞಿ ಪೈಂಬಚ್ಚಾಲ್ ಸ್ವಾಗತಿಸಿದರು. ಆಸ್ಪತ್ರೆಯ ಎಚ್.ಆರ್ ಅನುಶ್ರೀ ವಂದಿಸಿದರು. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಝಾಕ್ ಸಾಲ್ಮರ ಕಾರ್ಯಕ್ರಮ ನಿರೂಪಿಸಿದರು.

ಲ್ಯಾಬ್ ಇನ್‌ಚಾರ್ಜ್ ರಝಾಕ್ ಅಂಙತ್ತಡ್ಕ, ಸಿಬ್ಬಂದಿಗಳಾದ ಪದ್ಮನಾಭ ಬಂಗೇರ, ಅಶ್ರಫ್ ಅಡ್ಕಾರ್ ಮತ್ತಿತರರು ಸಹಕರಿಸಿದರು. ಕಾರ್ಯಕ್ರಮದಲ್ಲಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ, ಉದ್ಯಮ ಕ್ಷೇತ್ರದ, ಸಂಘ ಸಂಸ್ಥೆಗಳ ನೂರಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here