ನೆಲ್ಯಾಡಿ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆದ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಚಾಪೆ ವಿತರಣೆ ಮಾಡಲಾಯಿತು.
ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪದಾಧಿಕಾರಿಗಳಿಗೆ ಚಾಪೆ ವಿತರಣೆ ಮಾಡಿದರು.
