ಪುತ್ತೂರು: ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಸುಳ್ಯ ಇಲ್ಲಿ ಸಾಲ ಪಡೆದಿದ್ದ ಪುತ್ತೂರು ತಾಲೂಕು ಬಿರುಮಲೆ ನಿವಾಸಿ, ಪ್ರಾಥಮಿಕ ಶಾಲಾ ಶಿಕ್ಷಕ ಪುರುಷೋತ್ತಮ ಬಿ. ಎಂಬವರು ಸಾಲದ ಮರುಪಾವತಿಗಾಗಿ ಚೆಕ್ ನೀಡಿದ್ದು, ಬ್ಯಾಂಕಿನಲ್ಲಿ ಸಾಕಷ್ಟು ಮೊತ್ತ ಇಲ್ಲದೆ ಅಮಾನ್ಯಗೊಂಡಿತ್ತು. ಈ ಬಗ್ಗೆ ಸಹಕಾರಿಯವರು ಸುಳ್ಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಈ ಸಂಬಂಧ ಒಮ್ಮೆ ಕೋರ್ಟಿಗೆ ಹಾಜರಾಗಿದ್ದ ಆರೋಪಿಯು ಬಳಿಕ ಸಮನ್ಸ್, ವಾರಂಟ್ಗಳಾದರೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಸೆ.19ರಂದು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದುಬಂದಿದೆ.