ಪುತ್ತೂರು: ಮಾಣಿ ಗ್ರಾಮದ ಶಂಭುಗ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ನವರಾತ್ರಿ ನೇಮವು ಸೆ.29 ಸೋಮವಾರ ರಾತ್ರಿ ಶಂಭುಗ ಬಾಲಮಂಟಮೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಗೊನೆಮುಹೂರ್ತ ಗ್ರಾಮದ ತಂತ್ರಿಗಳಾದ ಪಳನೀರು ಅನಂತ ಭಟ್ ರವರ ಪೌರೋಹಿತ್ಯದಲ್ಲಿ ನಡೆಯಿತು.
ಮಾಣಿಗುತ್ತು ಸಚಿನ್ ರೈ, ಅರೆಬೆಟ್ಟುಗುತ್ತು ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ, ಮಜಿ ತಿರುಮಲಕುಮಾರ್, ಬಾಲಕೃಷ್ಣ ಆಳ್ವ ಕೊಡಾಜೆ, ಸದಾಶಿವ ಶೆಟ್ಟಿ ಶಂಭುಗ, ಲೋಕೇಶ್ ಬಂಗೇರ ಪಲ್ಲತ್ತಿಲ ಮತ್ತಿತರ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.
