ಪುತ್ತೂರು: ನವರಾತ್ರಿಯ ಸಂದರ್ಭದಲ್ಲಿ ಆಚರಿಸುವ ಶಾರದಾ ಪೂಜೆಗೆ ವಿಶೇಷ ಮಹತ್ವವಿದೆ. ಮಕ್ಕಳ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಯ ಸಲುವಾಗಿ ಇದೇ ಸೆ.22ರಂದು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಶಾರದಾ ಪೂಜೆಯನ್ನು ಹಮ್ಮಿಕೊಳ್ಳಲಾಯಿತು.

ಶ್ರೀ ಆಶ್ಲೇಷ ಭಟ್ ಪುರೋಹಿತರ ನೇತೃತ್ವದಲ್ಲಿ ನಡೆಸಲಾದ ಪೂಜೆಯಲ್ಲಿ ವಿದ್ಯಾದೇವತೆಯಾದ ಸರಸ್ವತಿಯ ಪೂರ್ಣಾನುಗ್ರಹವು ದೊರೆತು, ವಿದ್ಯಾರ್ಥಿಗಳ ಅಂತ:ಶಕ್ತಿಯು ಪ್ರಜ್ವಲಿಸುವಂತಾಗಲಿ ಎಂಬ ಆಶಯದೊಂದಿಗೆ ಪ್ರಾರ್ಥಿಸಲಾಯಿತು.