ನೆಲ್ಯಾಡಿ: ಸೆ.20ರಂದು ಮಂಗಳೂರಿನ ಕುಲಶೇಖರದ ಕೋರ್ಡೆಲ್ ಹಾಲ್ನಲ್ಲಿ ನಡೆದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಮನಗರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಉತ್ತಮ ಮಹಿಳಾ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಂಘದ ಅಧ್ಯಕ್ಷೆ ರೂಪಾ ಬಲ್ಯ, ಕಾರ್ಯದರ್ಶಿ ಕಮಲ ಬರೆಮೇಲು, ಮಾಜಿ ಅಧ್ಯಕ್ಷೆ ಆಶಾ ಎಸ್.ಜೋಗಿತ್ತಾಯ ಹಾಗೂ ನಿರ್ದೇಶಕರು ಪ್ರಶಸ್ತಿ ಸ್ವೀಕರಿಸಿದರು. ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಉಪಾಧ್ಯಕ್ಷ ಉದಯ ಎಸ್.ಕೋಟ್ಯಾನ್ ಹಾಗೂ ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಿದರು.