ರೋಟರಿ ಪುತ್ತೂರು ಸಿಟಿಯಿಂದ ಇಂಜಿನಿಯರ್ಸ್ ದಿನಾಚರಣೆ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸಿಟಿ ಆಶ್ರಯದಲ್ಲಿ ರೋಟರಿ ಮನೀಷಾ ಸಭಾಂಗಣದಲ್ಲಿ ಇಂಜಿನಿಯರ್ಸ್ ದಿನಾಚರಣೆ ಜರಗಿತು.

ಮುಖ್ಯ ಅತಿಥಿಯಾಗಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ರವಿಕೃಷ್ಣ ಡಿ ಕಲ್ಲಾಜೆ ಮಾತನಾಡಿ, ರೋಟರಿ ಕ್ಲಬ್ ನವರು ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ವಿವಿಧ ರೂಪಗಳಲ್ಲಿ ನೀಡುತ್ತಿದ್ದು ಮತ್ತು ಪ್ರಮುಖ ವ್ಯಕ್ತಿಗಳನ್ನು ಆಯ್ಕೆ ಮಾಡಿ ಗುರುತಿಸುವುದು, ಪ್ರತಿ ವಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರೊಂದಿಗೆ ರೋಟರಿ ಕ್ಲಬ್ ಸದಸ್ಯರ ಸಾಮಾಜಿಕ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 2,000 ಲೀಟರಿನ ನೀರಿನ ಟ್ಯಾಂಕನ್ನು ಕೊಡುಗೆ ನೀಡಿದ ಕ್ಲಬ್ಬಿನ ಸದಸ್ಯೆ ಕೃಷ್ಣವೇಣಿ ಕರುಣಾಕರ್ ರೈ ಇವರನ್ನು ಅಭಿನಂದಿಸಲಾಯಿತು. ಕಾಲೇಜ್ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ನೀಡಿದ ಪೂರ್ವಾಧ್ಯಕ್ಷ ಎಂ.ಆರ್ ಜಯಕುಮಾರ್ ರೈರವರ ಸೇವೆಗೆ ಕೃತಜ್ಞತೆ ಸಲ್ಲಿಸಲಾಯಿತು. ಕ್ಲಬ್ ನಿಯೋಜಿತ ಅಧ್ಯಕ್ಷ ಉಮೇಶ್ಚಂದ್ರ, ನಿಕಟಪೂರ್ವ ಅಧ್ಯಕ್ಷ ಮೊಹಮ್ಮದ್ ಸಾಬ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಅಧ್ಯಕ್ಷ  ಇಂಜಿನಿಯರ್ ರವಿಕೃಷ್ಣ ಡಿ ಕಲ್ಲಾಜೆ, ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ರೋಟರಿ ಕ್ಲಬ್ ನ ಸದಸ್ಯರಾದ ಇಂಜಿನಿಯರ್ ಗಳಾದ ಕಿರಣ್ ಬಿ.ವಿ, ದಯಾನಂದ ಪೈ, ಮತ್ತು ಪ್ರೇಮ್ ಕುಮಾರ್ ಇವರುಗಳನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here