ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ಆಶ್ರಯದಲ್ಲಿ ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಇವರ ಜನ್ಮದಿನವನ್ನು ಇಂಜಿನಿಯರ್ಸ್ಡೇ ಆಗಿ ಆಚರಿಸಲಾಯಿತು.

ಈ ಸಮಾರಂಭದ ಮುಖ್ಯಅತಿಥಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಸತ್ಯ ಗಣೇಶ್ ಯಂ. ಇವರು ಸರ್ ಎಂ. ವಿಶ್ವೇಶ್ವರಯ್ಯನವರು ನಮ್ಮ ದೇಶ ಕಂಡ ಅತ್ಯಂತ ದೊಡ್ಡ ಪ್ರತಿಭೆ. ಕಠಿಣ ಪರಿಶ್ರಮ ಮತ್ತು ಶಿಸ್ತು ಅವರಧ್ಯೇಯವಾಗಿತ್ತು. ಆತ್ಮ ಗೌರವಕ್ಕೆ ಚ್ಯುತಿ ಬಾರದಂತೆ ಗೌರವದಿಂದ ಶಿಸ್ತಿನಿಂದ ಅವರು ಬಾಳಿದರು. ವಿಶ್ವೇಶ್ವರಯ್ಯನವರ ಧ್ಯೇಯ, ಶಿಸ್ತನ್ನು ನಮ್ಮಲ್ಲಿ ಮೈಗೂಡಿಸಿಕೊಳ್ಳೋಣ ಎಂದು ಹೇಳಿ ವಿದ್ಯಾರ್ಥಿಗಳಿಗೆ ಇಂಜಿನಿಯರ್ಸ್ಡೇ ಶುಭಾಶಯ ತಿಳಿಸಿದರು. ಇವರ ಕಿರು ಪರಿಚಯವನ್ನು ತೃತೀಯ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ತಿರುಮಲೇಶ್ವರ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ವಿಷ್ಣುಮೂರ್ತಿ ಹಾಗೂ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಸುಧಾ ಕುಮಾರಿ ಇವರಿಗೆ ಗೌರವ ಸಮರ್ಪಣೆ ನಡೆಯಿತು.
ಕಾರ್ಯಕ್ರಮದ ಇನ್ನೋರ್ವ ಅತಿಥಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದರ ವಿರಾಮ್ ಎಸ್ ಮೊದಲಿಗೆ ನವರಾತ್ರಿ ಹಬ್ಬದ ಶುಭಾಶಯಗಳನ್ನು ತಿಳಿಸಿ ಈ ಹಬ್ಬದ ವಿಶೇಶತೆಯನ್ನು ಸಂಕ್ಷಿಪ್ತವಾಗಿ ವಿವರಿಸಿ, ಸರ್ ಎಂ. ವಿಶ್ವೇಶ್ವರಯ್ಯನವರ ಜೀವನ ಚರಿತ್ರೆಯನ್ನು ಸವಿವರವಾಗಿ ವಿವರಿಸುತ್ತಾ ಕಾರ್ಯತತ್ಪರತೆ ಹಾಗೂ ಸಮಯ ಪ್ರಜ್ಞೆಯಿಂದ ವಿಶ್ವೇಶ್ವರಯ್ಯನವರು ಏನೆಲ್ಲಾ ಸಾಧನೆ ಮಾಡಿದರು.
ಮೈಸೂರು ಸಂಸ್ಥಾನದ ಅಭಿವೃಧ್ಧಿಗೆ ಹೇಗೆ ರೂವಾರಿಯಾದರು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪಾಲಿಟೆಕ್ನಿಕ್ನ ಪ್ರಾಚಾರ್ಯರಾದ ಮುರಳೀಧರ್ ಯಸ್. ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಸ್ವಾರಸ್ಯಕರವಾದ ಕಥೆಯೊಂದಿಗೆ ವಿವರಿಸುತಾ,ಸರ್ ಎಂ. ವಿಶ್ವೇಶ್ವರಯ್ಯನವರ ವ್ಯಕ್ತಿತ್ವ ಮತ್ತು ಐತಿಹ್ಯದ ಬಗ್ಗೆ ಸವಿವರವಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಉಪನ್ಯಾಸಕೇತರ ಸಿಬ್ಬಂದಿ ವರ್ಗ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಧನುಷ್ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ತಿಕೇಯ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿಯರಾದ ಪರ್ಣಿಕಾ, ಪರ್ಣವಿ ಪ್ರಾರ್ಥಿಸಿದರು. ವಿದ್ಯಾರ್ಥಿ ರಂಜನ್ ಧನ್ಯವಾದ ನೀಡಿದರು.