ಪುತ್ತೂರು: ಉಪ್ಪಿನಂಗಡಿ ರೋಟರಿ ಕ್ಲಬ್ ಹಾಗೂ ಜೆ.ಎಸ್.ಡಬ್ಲ್ಯೂ ಫೌಂಡೇಶನ್ ಮಂಗಳೂರು ಹಾಗೂ ಅನುಗ್ರಹ ಕೆಡಿಟ್ ಸೌಹಾರ್ದ ಸಹಕಾರಿ ಸಂಘ, ಎನ್.ಎಸ್.ಎಸ್ ಶಿಬಿರ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ, ದ.ಕ. ಜಿ ಪ ಹಿರಿಯ ಪ್ರಾಥಮಿಕ ಶಾಲೆ 34 ನೆಕ್ಕಿಲಾಡಿ ಇದರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರಾ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷರಾದ ರೊ ಜಾನ್ ಕೆನ್ಯೂಟ್ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟನೆಯನ್ನು ಉಪ್ಪಿನಂಗಡಿಯ ದಂತ ವೈದ್ಯರು ಹಾಗೂ ಝೋನ್4 ರ ಅಸಿಸ್ಟೆಂಟ್ ಗವರ್ನರ್ ರೊ. ಪಿಹೆಚ್ಎಫ್ ಡಾ. ರಾಜಾರಾಂ ಕೆ. ಬಿ ರವರು ನೆರವೇರಿಸಿದರು. ಜೆ.ಎಸ್.ಡಬ್ಲ್ಯೂ ಫೌಂಡೇಶನ್ ಇದರ ಸಿ.ಆರ್.ಎಸ್ ಫಂಡ್ ಮ್ಯಾನೇಜರ್ ರೊ. ಪ್ರದೀಪ್ ಪೂಜಾರಿಯವರು ಹಾಗೂ ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಲ್ಟ್ರೇಡ್ ಡಿ.ಸೋಜಾ ಕ್ಯಾಂಪ್ ನ ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಶಾಂತಿನಗರ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಕಾಶ್ ಗೌಡ , ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯರಾದ ಕಾವೇರಿ, ಎನ್.ಎಸ್.ಎಸ್ ಶಿಬಿರದ ಸಂಯೋಜನಾಧಿಕಾರಿ ರಮೇಶ್ , ಅನಿ ಮಿನೆಜಸ್, ಜೆ.ಎಸ್.ಡಬ್ಲ್ಯೂ ಫೌಂಡೇಶನ್ ನ ಅಧಿಕಾರಿಯಾದ ಜಾನೆಟ್, ಸ್ಥಳೀಯರಾದ ಬಾಲಕೃಷ್ಣ ಶೆಟ್ಟಿ, 34 ನೆಕ್ಕಿಲಾಡಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಜೀವ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ರೊ. ಅಬ್ದುಲ್ ರಹಿಮಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಉಚಿತ ನೇತ್ರಾ ತಪಾಸಣಾ ಶಿಬಿರದಲ್ಲಿ ಸುಮಾರು 162 ಮಂದಿಯ ಕಣ್ಣಿನ ಪರೀಕ್ಷೆ ನಡೆಸಲಾಯಿತು. 100 ಕ್ಕೂ ಅಧಿಕ ಮಂದಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು.