ಪುತ್ತೂರು: ಕೋರ್ಟ್ ರಸ್ತೆಯ ಮಿನಿ ವಿಧಾನಸೌಧದ ಬಳಿಯ ತಾಲೂಕು ಸರಕಾರಿ ನೌಕರರ ಭವನದ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.24 ರಂದು ಪೂರ್ವಾಹ್ನ ಸಂಘದ ಅಧ್ಯಕ್ಷರಾದ ಜಯಂತ್ ನಡುಬೈಲುರವರ ಅಧ್ಯಕ್ಷತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಜರಗಲಿರುವುದು. ಸಂಘದ ಸದಸ್ಯರು ಮಹಾಸಭೆಯಲ್ಲಿ ಹಾಜರಾಗಿ ಸಲಹೆ, ಸೂಚನೆಗಳನ್ನು ನೀಡಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.