ಎರಡನೇ ದಿನದ ಸಂಭ್ರಮ : ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ
ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು, ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಪ್ರತಿದಿನ ರಾತ್ರಿ ಭಜನಾ ಸೇವೆ ಅಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ.
ಸೆ.23 ರಂದು ರಾತ್ರಿ ಭಜನಾ ಕಾರ್ಯಕ್ರಮ, ವಿದುಷಿ ಅಭಿಜ್ಞಾ ಮತ್ತು ಶಿಷ್ಯವೃಂದ ನಾಟ್ಯಾಭಿಯೋಗಿ ನೃತ್ಯಶಾಲೆ ತಿಂಗಳಾಡಿ ಇವರಿಂದ ‘ನೃತ್ಯಾರ್ಪಣಂ’ ನೃತ್ಯ ವೈವಿಧ್ಯ ನಡೆಯಿತು .ರಾತ್ರಿ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಊರ ಪರಊರ ನೂರಾರು ಭಕ್ತರು ಆಗಮಿಸಿ , ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು. ಶ್ರೀರಾಮ ಮಂದಿರದ ಆಡಳಿತ ಸಮಿತಿಯ ಅಧ್ಯಕ್ಷ ರಾಘವ ಗೌಡ ಕೆರೆಮೂಲೆ, ಪ್ರಧಾನ ಕಾರ್ಯದರ್ಶಿ ಅಗರಿ ಯಶೋಧರ ಚೌಟ ಪಟ್ಟೆತ್ತಡ್ಕ, ಕೋಶಾಧಿಕಾರಿ ಮುಂಡಾಳಗುತ್ತು ಮೋಹನ ಆಳ್ವ, ಶ್ರೀರಾಮ ಭಜನಾ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಕೋಡಿಯಡ್ಕ, ಕಾರ್ಯದರ್ಶಿ ನಿತೇಶ್ ರೈ ಕೋರಂಗ ಹಾಗೂ ಆಡಳಿತ ಸಮಿತಿ ಮತ್ತು ಭಜನಾ ಸಮಿತಿಯ ಸರ್ವ ಸದಸ್ಯರುಗಳು ಭಕ್ತಾದಿಗಳು ಭಾಗವಹಿಸಿದ್ದರು.

ಇಂದು ಸೆ.24 ಶ್ರೀ ಕ್ಷೇತ್ರದಲ್ಲಿ ರಾತ್ರಿ 7 ರಿಂದ ಭಜನೆ, ರಾತ್ರಿ 8-30ರಿಂದ ‘ಸಾಂಸ್ಕೃತಿಕ ವೈಭವ’ ವಿದುಷಿ ರಶ್ಮಿ ದಿಲೀಪ ರೈ ಮತ್ತು ಶಿಷ್ಯವೃಂದ ಬೃಂದಾವನ ನಾಟ್ಯಶಾಲೆ ಸನ್ಯಾಸಿಗುಡ್ಡೆ ಇವರಿಂದ ನಡೆಯಲಿದೆ.