ಆಲಂಕಾರು: ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಲಂಕಾರು ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ತೃಷಾ ಕೋಡಂದೂರು-ಚಾರ್ವಾಕರವರು 14ರ ವಯೋಮಾನದ ಬಾಲಕಿಯರ ವಿಭಾಗದ 400ಮೀ. ಓಟದಲ್ಲಿ ಚಿನ್ನದ ಪದಕ ಹಾಗೂ 200 ಮೀ.ಓಟದಲ್ಲಿ ಕಂಚಿನ ಪದಕ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಈಕೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಮಾತಾಜಿ, ಸಹಶಿಕ್ಷಕ ವೃಂದ ಮತ್ತು ಪೋಷಕರ ಸಹಕಾರದೊಂದಿಗೆ ಶಿಕ್ಷಕ ಚಂದ್ರಹಾಸ ಕೆ. ಸಿ.ಕುಂಟ್ಯಾನ ತರಬೇತಿ ನೀಡಿದ್ದರು.