ಕುಂತೂರು: ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಒಂದು ದಿನದ ಪ್ರಾರಂಭಿಕ ತರಬೇತಿ ಶಿಬಿರ ನಡೆಯಿತು.
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿನ ಸಂಚಾಲಕರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಪ್ಪಿನಂಗಡಿ ವಲಯದ ಅಧ್ಯಕ್ಷರಾದ ಶೇಷಪ್ಪ ರೈ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ತರಬೇತಿ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿ ಮಾತನಾಡಿದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಯುತ ಹರೀಶ್ ಕುಮಾರ್ ಟಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ನ ತರಬೇತುದಾರರಾದ ಪ್ರತೀಮ್ ಕುಮಾರ್ ಅವರು ಕಾಲೇಜಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಲಾದ ಒಂದು ದಿನದ ಪ್ರಾರಂಭಿಕ ತರಬೇತಿ ಶಿಬಿರವನ್ನು ನಡೆಸಿಕೊಟ್ಟರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೀತಿಕಾ ಡಿ ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ಹಲೀಮತ್ ಅಜ್ಮೀನಾ ವಂದಿಸಿದರು. ಪ್ರಶಿಕ್ಷಣಾರ್ಥಿಗಳಾದ ದೀಕ್ಷಿತಾ ಯು ಮತ್ತು ದಿವ್ಯಾ ಪಿ ಕಾರ್ಯಕ್ರಮ ನಿರೂಪಿಸಿದರು.