ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ – ಮೂರನೇ ದಿನದ ಸಂಭ್ರಮ- ಭಜನಾ ಸೇವೆ, ಸಾಂಸ್ಕೃತಿಕ ವೈಭವ ಕಾರ್ಯಕ್ರಮ

0

ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.೨೨ ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ. ಸೆ.24ರಂದು ರಾತ್ರಿ ಎಂ.ಕರುಣಾಕರ ರೈ ಅತ್ರೆಜಾಲುರವರ ಭಜನಾ ಸೇವೆ ನಡೆಯಿತು.

ತಿಂಗಳಾಡಿ ದೇವಗಿರಿ ಶ್ರೀ ದೇವತಾ ಭಜನಾ ಮಂಡಳಿಯವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ವಿದುಷಿ ರಶ್ಮಿ ದಿಲೀಪ ರೈ ಮತ್ತು ಶಿಷ್ಯವೃಂದ ಬೃಂದಾವನ ನಾಟ್ಯ ಶಾಲೆ ಸನ್ಯಾಸಿಗುಡ್ಡೆ ಇವರಿಂದ ಸಾಂಸ್ಕೃತಿಕ ವೈಭವ ನಡೆಯಿತು. ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಊರ ಪರವೂರ ನೂರಾರು ಭಕ್ತಾಧಿಗಳು ಆಗಮಿಸಿ ಅನ್ನಪ್ರಸಾದ ಸ್ವೀಕರಿಸಿದರು. ಶ್ರೀರಾಮ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ರಾಘವ ಗೌಡ ಕೆರೆಮೂಲೆ, ಪ್ರ.ಕಾರ್ಯದರ್ಶಿ ಅಗರಿ ಯಶೋಧರ ಚೌಟ ಪಟ್ಟೆತ್ತಡ್ಕ, ಕೋಶಾಧಿಕಾರಿ ಮುಂಡಾಳಗುತ್ತು ಮೋಹನ ಆಳ್ವ, ಶ್ರೀ ರಾಮ ಭಜನಾ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಕೋಡಿಯಡ್ಕ, ಕಾರ್ಯದರ್ಶಿ ನಿತೇಶ್ ರೈ ಕೋರಂಗ ಹಾಗೂ ಆಡಳಿತ ಸಮಿತಿ ಮತ್ತು ಭಜನಾ ಸಮಿತಿಯ ಸರ್ವ ಸದಸ್ಯರುಗಳು, ಭಕ್ತಾಧಿಗಳು ಭಾಗವಹಿಸಿದ್ದರು.


ಇಂದು ಶ್ರೀ ಕ್ಷೇತ್ರದಲ್ಲಿ…
ಸೆ.25 ರಂದು ರಾತ್ರಿ 7 ರಿಂದ ಭಜನಾ ಸೇವೆ, ಭಜನಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಅಭಿನವ ಕೇಸರಿ ಸಾರಥ್ಯದ ಅಭಿನವ ಯಕ್ಷಕಲಾ ಕೇಂದ್ರ ಮಾಡಾವು ಇವರಿಂದ ಯಕ್ಷಗಾನ ಬಯಲಾಟ ‘ಲೀಲಾವಿನೋದಿ ಶ್ರೀ ಕೃಷ್ಣ’ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here