
ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ದೇಶಾದ್ಯಂತ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪುತ್ತೂರಿನಲ್ಲೂ ಹಲವು ಕಾರ್ಯಕ್ರಮ ನಡೆದಿದೆ. ಈ ನಡುವೆ ಮೋದಿಯವರ ದೀರ್ಘಾಯುಷ್ಯ ಮತ್ತು ಅವರ ನಾಯಕತ್ವದ ಯಶಸ್ಸಿಗಾಗಿ ಸೆ.25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ರುದ್ರ ಸೇವೆ ಮತ್ತು ದೇವಳಕ್ಕೆ 1 ಕ್ವಿಂಟಾಲ್ ಅಕ್ಕಿಯನ್ನು ಸಮರ್ಪಣೆ ಮಾಡಲಾಯಿತು.
ಬೆಳಿಗ್ಗೆ ದೇವಳದ ಸತ್ಯ ಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿ ದೀಪ ಪ್ರಜ್ವಲಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಪ್ರಾರ್ಥನೆ ಮಾಡಿದರು. ಇದೇ ಸಂದರ್ಭ ದೇವಳಕ್ಕೆ ವ್ಯವಸ್ಥಾಪನಾ ಸಮಿತಿಯ ಕೋರಿಕೆಯಂತೆ 1 ಕ್ವಿಂಟಾಲ್ ಅಕ್ಕಿಯನ್ನು ಸಮರ್ಪಣೆ ಮಾಡಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ ಬಿ ಮತ್ತು ಪದಾಧಿಕಾರಿಗಳು, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಉಪಸ್ಥಿತರಿದ್ದರು.