ಪುಚ್ಚೇರಿ: ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕಿನ ನೆಲ್ಯಾಡಿ ವಲಯದ ಕುಡ್ತಾಜೆ ಕಾರ್ಯಕ್ಷೇತ್ರ ಬೃಂದಾವನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಪುಚ್ಚೇರಿ ಶಾಲೆಯಲ್ಲಿ ನಡೆಯಿತು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೇಳಿದರು.


ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯೆ ಸೀತಾ ವಹಿಸಿದ್ದರು. ಅತಿಥಿಯಾಗಿದ್ದ ನೆಲ್ಯಾಡಿ ಜೆ.ಸಿ.ಐ ನಿಕಟಪೂರ್ವ ಅಧ್ಯಜ್ಷೆ ಸುಚಿತ್ರ ಜೆ. ಬಂಟ್ರಿಯಲ್ ಮಾತನಾಡಿದರು. ನೆಲ್ಯಾಡಿ ವಲಯ ಅಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್, ಪುಚ್ಚೇರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಯಶವಂತ ತೋಟ, ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ., ಕಡಬ ತಾಲೂಕಿನ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಚೇತನ, ನೆಲ್ಯಾಡಿ ವಲಯದ ಮೇಲ್ವಿಚಾರಕ ಆನಂದ ಡಿ.ಬಿ., ಬೃಂದಾವನ ಜ್ಞಾನವಿಕಾಸ ಕೇಂದ್ರದ ಸಂಯೋಜಕಿ ಯಶ್ವಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕುಸುಮ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಕವಿತಾ ವಂದಿಸಿದರು. ಕೇಂದ್ರದ ಸದಸ್ಯೆ ನಳಿನಾಕ್ಷಿ ಕುಡ್ತಾಜೆ ನಿರೂಪಿಸಿದರು. ಮಾದೇರಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸಂತೋಷ್ ಸಹಕರಿಸಿದರು. ಸಭಾ ಕಾರ್ಯಕ್ರಮದ ನಂತರ ಕೇಂದ್ರದ ಸದಸ್ಯರಿಂದ ವಿವಿಧ ಮನೋರಂಜನ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಮನ್ವಯ ಅಧಿಕಾರಿ ಚೇತನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು, ಶೌರ್ಯ ತಂಡದ ಪ್ರತಿನಿಧಿ, ಸೇವಾ ಪ್ರತಿನಿಧಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಮಾದೇರಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here