ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಮತ್ತು ಸ್ಟಾರ್ ಆಪ್ಟಿಕಲ್ಸ್ ಪುತ್ತೂರು ವತಿಯಿಂದ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿನ ವಿದ್ಯಾರ್ಥಿಗಳಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಇತ್ತೀಚೆಗೆ ಜರಗಿತು.

ಶಾಲಾ ಎಸ್.ಡಿ.ಎಂ.ಸಿ ಗೌರವ ಅಧ್ಯಕ್ಷರಾದ ರಾಮ ಜೋಯಿಸ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ರೋಟರಿ ಕ್ಲಬ್ ನ ವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಚಂದ್ರಹಾಸ ರೈ ಬಿ ಸಭಾಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಮುಖ್ಯ ಗುರುಗಳಾದ ಜಾನೆಟ್ ಸಿಕ್ವೇರಾರವರು ಶುಭ ಹಾರೈಸಿದರು. ರೋಟರಿ ಸೆಂಟ್ರಲ್ ಕಾರ್ಯದರ್ಶಿ ಜಯಪ್ರಕಾಶ್ ಎ.ಎಲ್, ಉಪಾಧ್ಯಕ್ಷ ಪ್ರದೀಪ್ ಪೂಜಾರಿ, ಕಾರ್ಯಕ್ರಮ ಸಂಯೋಜಕರಾದ ಪುರುಷೋತ್ತಮ ನಾಯ್ಕ್, ಕಮ್ಯುನಿಟಿ ಸರ್ವಿಸ್ ನಿರ್ದೇಶಕ ಮಹಮ್ಮದ್ ರಫೀಕ್, ಸ್ಟಾರ್ ಆಪ್ಟಿಕಲ್ಸ್ ನ ತಬ್ಸೀರ್ ಮತ್ತು ಕುಡಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಪ್ಪ ಪೂಜಾರಿರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕ ಗಣೇಶ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್ ಕಾರ್ಯಕ್ರಮ ನಿರೂಪಿಸಿದರು.
ಪೂರ್ವಾಹ್ನದಿಂದ ಅಪರಾಹ್ನದವರೆಗೆ ಜರಗಿದ ನೇತ್ರ ಚಿಕಿತ್ಸಾ ತಪಾಸಣಾ ಶಿಬಿರದಲ್ಲಿ ಶಾಲೆಯ 78 ವಿದ್ಯಾರ್ಥಿಗಳು ಮತ್ತು 25ರಷ್ಟು ಪೋಷಕರು ಉಚಿತ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.