
ಪುತ್ತೂರು: ಆರ್ಯಾಪು ಗ್ರಾಮದ ಕುಂಜೂರು ಪಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವ ಪ್ರಯುಕ್ತದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿಯ ಕಲಾತಂಡದಿಂದ ಸೋಮವಾರ ‘ನೃತ್ಯೋಹಂ’ ಭರತನಾಟ್ಯ ನೃತ್ಯ ಏರ್ಪಟ್ಟಿತು.

ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಕಲಾ ಅಕಾಡೆಮಿಯ ವಿದ್ಯಾರ್ಥಿಗಳು ನೃತ್ಯ ಪ್ರಸ್ತುತಪಡಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು ಹಾಗೂ ಸಾಂಸ್ಕೃತಿಕ ಸಮಿತಿ ಮುಖ್ಯಸ್ಥರು, ಅರ್ಚಕರು ಕಲಾವಿದರಿಗೆ ಶ್ರೀದೇವಿಯ ಪ್ರಸಾದ ನೀಡಿ ಶುಭ ಕೋರಿದರು.

