
ಕಾಣಿಯೂರು: ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ ಎಚ್ ಸಾಂಪ್ರದಾಯಿಕ ಯೋಗಾಸನದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಗೌಡ ಮತ್ತು ಸುಜಿತಾ ದಂಪತಿಗಳ ಸುಪುತ್ರಿ. ಇವರಿಗೆ ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ಕೆ ತರಬೇತು ನೀಡಿರುತ್ತಾರೆ.