ಪುತ್ತೂರು: ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 10ನೇ ತರಗತಿಯ ಧನ್ವಿ ಎ.ಎಂ 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಸುದೀಪ್ ತರಬೇತಿ ನೀಡಿರುತ್ತಾರೆ. ಗ್ರಾಮೀಣ ಪ್ರತಿಭೆಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯಗುರು, ಅಧ್ಯಾಪಕ ವೃಂದದವರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.