ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಕ್ಷೇತ್ರ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.28ರಂದು ಆಯುಧ ಪೂಜೆ, ಷಷ್ಠಿ ಪೂಜೆ ನಡೆಯಲಿದೆ.

ಸೆ.28ರಂದು ಬೆಳಿಗ್ಗೆ 10ರಿಂದ 11.30ರವರೆಗೆ ಆಯುಧ ಪೂಜೆ, ಮಧ್ಯಾಹ್ನ 12 ಗಂಟೆಗೆ ಷಷ್ಠಿ ಪೂಜೆ, ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂತೋಷ್ ಕುಮಾರ್ ರೈ ಇಳಂತಾಜೆ ಅವರು ಸೇವಾಕರ್ತರಾಗಿದ್ದಾರೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ12 ಗಂಟೆಯವರೆಗೆ ನವರಾತ್ರಿ ವೇಷಧಾರಿಗಳ ಕುಣಿತ ಪ್ರದರ್ಶನ ನಡೆಯಲಿದೆ. ಭಕ್ತಾದಿಗಳು ದೇವತಾ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.