ಪುತ್ತೂರು: ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತ ಎ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
