ಪುತ್ತೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಪೊಲೀಸರು ಸೆ.26ರಂದು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬಂಟ್ವಾಳ ತಾಲೂಕಿನ ಅಳಿಕೆ ನಿವಾಸಿ ಮಹಮ್ಮದ್ ಇಷ್ರಾದ್ ಕೆ.ಎ @ ಇರ್ಷಾದ್ (32 ವರ್ಷ) ಎಂದು ತಿಳಿದುಬಂದಿದೆ.ಈ ಹಿಂದೆ ಆರೋಪಿಯು ತಲೆ ಮರೆಸಿಕೊಂಡಿದ್ದು ಮಾನ್ಯ ನ್ಯಾಯಲಯವು 2023 ರಲ್ಲಿ ವಾರಂಟ್ ಹೊರಡಿಸಿತ್ತು.ಬಳಿಕ ಆತನ ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು ಬಂಟ್ವಾಳ ತಾಲೂಕಿನ ಅಳಿಕೆ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈತನ ಮೇಲೆ ಪುತ್ತೂರು ನಗರ ಠಾಣೆಯಲ್ಲಿ, ಬಂಟ್ವಾಳ ನಗರ ಠಾಣೆಯಲ್ಲಿ,ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ,ನಾನಾ ಪ್ರಕರಣಗಳು ದಾಖಲಾಗಿದೆ.