ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಇಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸೆ.25ರಂದು ನಡೆಯಿತು.
ಅರ್ಚಕ ಶ್ರೀಧರ ನೂಜಿನ್ನಾಯ ಅವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಡಾ.ಸದಾನಂದ ಕುಂದರ್, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ಕಾರ್ಯದರ್ಶಿ ಸುಧೀರ್ ಕುಮಾರ್ ಕೆ.ಎಸ್., ಕೋಶಾಧಿಕಾರಿ ವಿನೋದ್ ಕುಮಾರ್ ಬಿ.ಜೆ., ಆಡಳಿತ ಮಂಡಳಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು. ಮಹಾಪೂಜೆಯ ನಂತರ ತೀರ್ಥ ಪ್ರಸಾದ ವಿತರಿಸಿ, ಅನ್ನಸಂತರ್ಪಣೆ ನಡೆಯಿತು.
