ಪುತ್ತೂರು: ನಾಡಿನ ಹೆಸರಾಂತ ಸಾಹಿತಿ ಎಸ್. ಎಲ್ ಭೈರಪ್ಪ ಇವರ ನಿಧನದ ಹಿನ್ನೆಲೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನುಡಿನಮನವನ್ನು ಸಲ್ಲಿಸಲಾಯಿತು.
ಸಭೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಮಾತನಾಡಿ, ಕನ್ನಡ ಸಾಹಿತ್ಯ ಲೋಕದ ಧೀಮಂತ ಸಾಹಿತಿ ಹಾಗೂ ಭಾರತೀಯ ಪರಂಪರೆಯ ಧೋರಣೆಗಳನ್ನು ನಾಡಿನಾದ್ಯಂತ ಬೆಳಗಿದ ಸರಸ್ವತಿ ಸಮ್ಮಾನ್ ಹಾಗೂ ಪದ್ಮಭೂಷಣ ಪುರಸ್ಕೃತ ಸಾಹಿತಿಗಳಾದ ಡಾ. ಎಸ್. ಎಲ್. ಭೈರಪ್ಪನವರ ಅಗಲುವಿಕೆ ಕನ್ನಡ ನಾಡಿಗೆ ಭರಿಸಲಾಗದ ನಷ್ಟ ಎಂದು ನುಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದು ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಅಗಲಿದ ಹಿರಿಯ ಚೇತನಕ್ಕೆ ಸಂತಾಪ ಸೂಚಿಸಿದರು.