ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲದ ಕೋಡಿಬೈಲು ದಿ. ಪುಟ್ಟಣ್ಣ ಗೌಡರ ಪತ್ನಿ ಲಕ್ಷ್ಮೀ(78ವ.) ಅಲ್ಪ ಕಾಲದ ಅಸೌಖ್ಯದಿಂದ ಸೆ.26ರಂದು ರಾತ್ರಿ ಸ್ವ ಗೃಹದಲ್ಲಿ ನಿಧನರಾದರು.
ಮೃತರು ಪುತ್ರರಾದ ಶ್ರೀನಿವಾಸ ಗೌಡ, ತಿಮ್ಮಪ್ಪ ಗೌಡ ಹಾಗೂ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷರು, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಮತ್ತು ಪುತ್ತಿಲ ಪರಿವಾರದ ನಿರ್ದೇಶಕರಾಗಿರುವ ಉಮೇಶ್ ಕೋಡಿಬೈಲು, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಕಾರ್ಯದರ್ಶಿಗಳಾದ ಅನಿಲ್ ತೆಂಕಿಲ, ಯುವರಾಜ ಪೆರಿಯತ್ತೋಡಿ, ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಮುಂಡೂರು ಗ್ರಾ.ಪಂ ಸದಸ್ಯ ಅಶೋಕ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಕೋಶಾಧಿಕಾರಿ ರೂಪೇಶ್ ನಾಕ್, ಪ್ರವೀಣ್ ಶೆಟ್ಟಿ ತಿಂಗಳಾಡಿ, ನರಿಮೊಗರು ಗ್ರಾ.ಪಂ ಸದಸ್ಯ ನವೀನ್ ರೈ ಶಿಬರ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಡಿ., ಉಪಾಧ್ಯಕ್ಷೆ ಪವಿತ್ರ ಕೆ.ಪಿ., ನಿರ್ದೇಶಕರಾದ ವಿಶ್ವನಾಥ ಬಲ್ಯಾಯ, ಬಾಬು ಶೆಟ್ಟಿ ವೀರಮಂಗಲ, ಟೌನ್ ಬ್ಯಾಂಕ್ ನಿರ್ದೇಶಕ ರಾಜು ಶೆಟ್ಟಿ, ರವಿಕುಮರ್ ರೈ ಕೆದಂಬಾಡಿ, ಗಣೇಶ್ ಮಕರಂದ, ಪ್ರವೀಣ್ ಭಂಡಾರಿ, ಸುಬ್ರಹ್ಮಣ್ಯ ಭಟ್ ಬಾವ, ಆನಾಜೆ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಪೆಲತ್ತಡಿ ಸಹಿತ ಹಲವು ಮಂದಿ ಗಣ್ಯರು ಮೃತರ ಮನೆಗೆ ಆಗಮಿಸಿ ಸಂತಾಪ ಸೂಚಿಸಿದರು.