
ಪುತ್ತೂರು: ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿ ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದು ಸೆ.26 ರಂದು ಶ್ರೀ ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ನೃತ್ಯ ನಿರ್ದೇಶಕ ವಿದ್ವಾನ್ ಬಿ ದೀಪಕ್ ಕುಮಾರ್, ವಿದುಷಿ ಪ್ರೀತಿಕಲಾ ಹಾಗು ವಿದ್ವಾನ್ ಗಿರೀಶ್ ಕುಮಾರ್ ಅವರ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳಿಂದ ನೃತ್ಯಾಂಜಲಿ ಭರತನಾಟ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು.
ಸುಮಾರು 13 ವಿವಿಧ ಅಭಿಯನದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ವಿದ್ವಾನ್ ದೀಪಕ್ ಕುಮಾರ್ ಅವರನ್ನು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗನ್ನಾಥ ರೈ ಮತ್ತು ಸಮಿತಿ ಸದಸ್ಯರು ಹಾಗು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ಅವರು ಸನ್ಮನಿಸಿದರು. ಜೊತೆಗೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಗೌರವಿಸಿದರು.