ಬಡಗನ್ನೂರು : ಆದಿದೈವ ಧೂಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಕದ್ರಿ ಬಿಲ್ಲವ ಸಂಘದ ಸದಸ್ಯರಿಂದ ಭಜನಾ ಸಂಕೀರ್ತಣೆ ನಡೆಯಿತು. ಬಳಿಕ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.
ಸಂಜೆ ಕೋಣಾಲು ಶಿರ್ಲೆ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.ರಾತ್ರಿ ಮಹಾಪೂಜೆ ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಿತು.ಅರ್ಚಕ ಪ್ರಜ್ವಲ್ ಪಕ್ಕಿಬೆಟ್ಟು ಧಾರ್ಮಿಕ ವಿಧಿ ವಿಧಾನಗಳು ನೆರವೇರಿಸಿದರು.

ಈ ಸಂಧರ್ಭದಲ್ಲಿ ಕ್ಷೇತ್ರಾಢಳಿತ ಸಮಿತಿ ಗೌರವಾಧ್ಯಕ್ಷರಾದ ಪಿತಾಂಬರ ಹೇರಾಜೆ, ಜಯಂತ ನಡುಬೖೆಲು, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಉಪಾಧ್ಯಕ್ಷ ದೀಪಕ್ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ಕೆ.ಬಿ ರಾಜಾರಾಮ್, ಮೂಕ್ತೇಸರ ಶ್ರೀಧರ ಪೂಜಾರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಟ್ರಸ್ಟಿಗಳಾದ ನಾರಾಯಣ ಮಚ್ಚಿನ, ನಾಗೇಶ್ ಪೂಜಾರಿ ಸುರತ್ಕಲ್, ಸುರೇಶ ಪೂಜಾರಿ ದಲ್ಕಾಜೆ ಯಶವಂತ ಕಡೆಶಿವಾಲಯ ಮತ್ತಿತರು ಗಣ್ಯರು ಹಾಗೂ ಊರಪರವೂರ ಭಕ್ತಾಧಿಗಳು ಭಾಗವಹಿಸಿದ್ದರು.