ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ, ತಾಲೂಕು ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಯೋಗಲ್ಲಿ ಅ.2 ರಂದು ಅಪರಾಹ್ನ 3.30 ರಿಂದ ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದ ಅಂಗಳದಲ್ಲಿ ನವರಾತ್ರಿ ವಿಶೇಷವಾಗಿ ಐಸಿರಿ ತಂಡದಿಂದ ಭಜನೆ, ಕೀರ್ತಿಶೇಷ ಪಿಲಿ ರಾಧಣ್ಣನ ಶಾರದಾ ಹುಲಿ ತಂಡದಿಂದ ‘ಪಿಲಿ ಪಜ್ಜೆ ’ ಹಾಗೂ ಆಯುಧ ಪೂಜೆ ನಡೆಯಲಿದೆ.
ಶಾಸಕ ಅಶೋಕ್ ಕುಮಾರ್ ರೈ ಕಾರ‍್ಯಕ್ರಮ ಉದ್ಘಾಟಿಸಲಿದ್ದಾರೆ. ಡಾಕ್ಟರೇಟ್ ಪದವಿ ಪುರಸ್ಕೃತ ಶರವೂರು ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹೇಮಂತ್ ರೈ ಮನವಳಿಕೆಗುತ್ತುರವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸನ್ಮಾನಿಸಲಿದ್ದಾರೆ. ವಿಶೇಷ ಅತಿಥಿಯಾಗಿ ಅಬುಧಾಬಿಯ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷರುಗಳು, ತಾಲೂಕು ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಬಂಟರ ಸಂಘದ ಪ್ರಧಾನ ಕಾರ‍್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಹಾಗೂ ಕೋಶಾಽಕಾರಿ ಸಂತೋಷ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ