ಸವಣೂರು : ಶ್ರೀ ಶಾರದಾಂಬಾ ಸೇವಾ ಸಂಘ ಸವಣೂರು ಇದರ ವತಿಯಿಂದ ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ 21ನೇ ವರ್ಷದ ನಾಡಹಬ್ಬ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.2 ರಂದು ನಡೆಯಲಿದೆ.
ಕಾರ್ಯಕ್ರಮದಲ್ಲಿ ಅ.2ರಂದು ಬೆಳಿಗ್ಗೆ 8 ಕ್ಕೆ ಉದಯ ಕುಮಾರ್ ಸರ್ವೆ ಅವರು ಧ್ವಜಾರೋಹಣ ನೆರವೇರಿಸುವರು. ಬಳಿಕ ಶ್ರೀ ದೇವಿಯ ಪ್ರತಿಷ್ಟೆ, ಗಣ ಹೋಮ, ಮುಗೇರು ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.ಬೆಳಿಗ್ಗೆ 10ಕ್ಕೆ ಮಕ್ಕಳಿಗೆ ಅಕ್ಷರಾಭ್ಯಾಸ ಶಾರದಾ ಮಾತೆಯ ಸಮ್ಮುಖದಲ್ಲಿ ನಡೆಯಲಿದೆ.
ಬೆಳಿಗ್ಗೆ 11.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೆಂಕಪ್ಪ ಶೆಟ್ಟಿ ಸವಣೂರುಗುತ್ತು ವಹಿಸುವರು. ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅತಿಥಿಗಳಾಗಿ ಪಾಲ್ಗೊಳ್ಳುವರು.
ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್‌ನ ಅಧ್ಯಕ್ಷ ಗಿರಿಶಂಕರ ಸುಲಾಯ ದೇವಸ್ಯ ಅವರು ಧಾರ್ಮಿಕ ಉಪನ್ಯಾಸ ನೀಡುವರು.
ಸನ್ಮಾನ
ಕಾರ್ಯಕ್ರಮದಲ್ಲಿ ನಿವೃತ್ತ ಗ್ರಾಮಲೆಕ್ಕಾಧಿಕಾರಿ ಯುವರಾಜ ಕಡಂಬ,ನಿವೃತ್ತ ಪ್ರಧಾನ ಅಂಚೆಪಾಲಕರಾದ ಸೀತಾರಾಮ ಮುಂಡಾಳ,ನಿವೃತ್ತ ಅಂಚೆ ವಿತರಕರಾದ ನಾರಾಯಣ ಕನಡ ಬಸ್ತಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಮಧ್ಯಾಹ್ನ 1.30ರಿಂದ ನಡೆಯುವ
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳೂರು ಶ್ರೀ ಶಾರದಾ ಅಂಧರ ಗೀತಾ ಗಾಯನ ಕಲಾ ಸಂಘದಿಂದ ಅಂಧರ ಗೀತ ಗಾಯನ ನಡೆಯಲಿದೆ.
ಸಂಜೆ 4.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಶ್ರೀ ಶಾರದಾ ಮೂರ್ತಿಯ ವಿಜೃಂಭಣೆಯ ಶೋಭಾಯಾತ್ರೆಯು ಮುಖ್ಯ ರಸ್ತೆಯಲ್ಲಿ ಸಾಗಿ ಸರ್ವೆ ಗೌರಿ ಹೊಳೆಯಲ್ಲಿ ಶ್ರೀಶಾರದಾ ಮೂರ್ತಿಯ ಜಲಸ್ಥಂಬನ ನಡೆಯಲಿದೆ.ಮೆರವಣಿಗೆಯಲ್ಲಿ ವಿವಿಧ ತಂಡಗಳಿಂದ ಕುಣಿತ ಭಜನೆ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ,ಅಧ್ಯಕ್ಷ ವಸಂತ ರೈ ಸೊರಕೆ,ಕಾರ್ಯದರ್ಶಿ ವೆಂಕಪ್ಪ ಗೌಡ ಅಡೀಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.