ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.1ರಂದು ಸಾಮೂಹಿಕ ಆಯುಧ ಪೂಜೆ ನಡೆಯಿತು.
ಬೆಳಿಗ್ಗೆ ದೇವಳದ ಬ್ರಹ್ಮರಥ, ಸಣ್ಣರಥಗಳಿಗೆ ಆಯುಧ ಪೂಜೆ ನಡೆದ ಬಳಿಕ ಸಾಮೂಹಿಕ ಆಯುಧ ಪೂಜೆ ನಡೆಯಿತು.
ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಆಯುಧಪೂಜೆ ನೆರವೇರಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ದಿನೇಶ್ ಪಿ.ವಿ, ನಳಿನಿ ಪಿ ಶೆಟ್ಟಿ, ಕೃಷ್ಣವೇಣಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.