ಪುತ್ತೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ(ಮೆಸ್ಕಾಂ) ಇದರ ಅಧ್ಯಕ್ಷರಾಗಿ ನೇಮಕಗೊಂಡಿರುವ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆದ ಕೆ ಹರೀಶ್ ಕುಮಾರ್ ಅವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣ ನರಿಮೊಗರು ಅವರು ಹೂಗುಚ್ಚ ನೀಡಿ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ನನ್ನ ಆತ್ಮೀಯರಾದ ಹರೀಶ್ ಕುಮಾರ್ ಅವರು ಮೆಸ್ಕಾಂ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಸಂತೋಷವಾಗಿದ್ದು ಅವರಿಂದ ಸಮಾಜಕ್ಕೆ ಇನ್ನಷ್ಟು ಉತ್ತಮ ಸೇವೆ ಸಿಗಲಿ ಎಂದು ವೇದನಾಥ ಸುವರ್ಣ ಹಾರೈಸಿದರು.