ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಯುಧ ಪೂಜೆ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವರ್ಷಂಪ್ರತಿ ನಡೆಯುವಂತೆ ಆಯುಧ ಪೂಜಾ ಕಾರ‍್ಯಕ್ರಮವು ಸಂಚಾಲಕರಾದ ಮಹಾದೇವ ಶಾಸ್ತ್ರಿ ಇವರ ನೇತೃತ್ವದಲ್ಲಿ ನಡೆಯಿತು.

ದೇವಿ ಆರಾಧನೆ, ದೇವಿಸ್ತೋತ್ರ ಪಠಣ, ಪ್ರಯೋಗಾಲಯಗಳ ಪೂಜೆ, ವಾಹನ ಪೂಜೆ ನಡೆದವು. ಕಾರ‍್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿ ಸದಸ್ಯರಾದ ರವಿಮುಂಗ್ಲಿಮನೆ, ಅಗರ್ತಬೈಲು ಕೃಷ್ಣನಾಯ್ಕ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಮುರಳೀಧರ್ ಯಸ್, ಶಿಕ್ಷಕ- ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದರು.

LEAVE A REPLY

Please enter your comment!
Please enter your name here