ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಯವರ ಸಂಸ್ಮರಣೆ ನಡೆಯಿತು.
ಗಾಂಧೀಜಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಶಾಲಾ ಮುಖ್ಯ ಗುರು ಸತೀಶ್ ಕುಮಾರ್ ದೀಪ ಪ್ರಜ್ವಲನೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ನಂತರ ಗುಜರಾತಿನ ಶ್ರೇಷ್ಠ ಕವಿ ನರಸಿ ಮೆಹ್ತಾ ರಚಿಸಿದ “ವೈಷ್ಣವ ಜನತೋ“ ಎನ್ನುವ ಗೀತೆಯನ್ನು ಶಾಲಾ ಶಿಕ್ಷಕಿಯರಾದ ಸೌಮ್ಯ, ರೇಷ್ಮಾ, ಯಶಸ್ವಿನಿ ಹಾಗೂ ಕವಿತಾ ಹಾಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥೆ ಸಂಧ್ಯಾ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ ಕೆಡೆಟ್ ಗಳು ಗಾಂಧೀಜಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.