ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿಗಳಾದ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ದಲಾರಿ ಅವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಗಳ ಭಾವಚಿತ್ರಕ್ಕೆ ನಮನ ಸಲ್ಲಿಸುವ ಮೂಲಕ ಗೌರವಾರ್ಪಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಸದಸ್ಯರಾದ ತೇಜಕುಮಾರಿ ಉದಲಡ್ಡ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶೋಭಾ ಬಾಕಿಲ, ಸಹ ಶಿಕ್ಷಕಿ ಶೋಭಾ ಖಂಡಿಗ, ಗೌರವ ಶಿಕ್ಷಕಿ ಶಿಸ್ಮಿತಾ ರೈ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಪುರಂದರ ಅಂಬುಲ, ದಿನೇಶ ಕುಕ್ಕುನಡ್ಕ, ವಸಂತ ಮುಂಗ್ಲಿಮನೆ , ಲೋಕೇಶ ಅಭಿಕಾರ, ಕೃಷ್ಣಪ್ಪ ಮುದ್ವ, ಮೋಹಿನಿ ಬಾಕಿಲ, ಧರ್ಮಾವತಿ ಮುದ್ವ, ರಾಜೀವಿ ಕಂಡಿಗ, ಮಮತ ಮಧುವ, ಯಶೋಧ ಗೌಡಮನೆ, ಕಾರ್ಯಕ್ರಮದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯಗುರು ಪದ್ಮಯ ಗೌಡ, ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಸಹ ಶಿಕ್ಷಕಿ ಮೋಹಿನಿ ಎನ್ ವಂದಿಸಿದರು.