ಪುತ್ತೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಶಿಕ್ಷಣ ಇಲಾಖೆ, ದ.ಕ ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕುಂಬ್ರ ಮರ್ಕಝುಲ್ ಹುದಾ ಪದವಿಪೂರ್ವ ವಿಭಾಗದ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೆ.ಎಂ ಫಾತಿಮತ್ ತ್ವೈಬ(ಅಮ್ಚಿನಡ್ಕ ಇಬ್ರಾಹಿಂ ಬಾತಿಷಾರವರ ಪುತ್ರಿ) ತೃತೀಯ ಸ್ಥಾನ ಗಳಿಸಿದ್ದು, ಅ.2ರಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ದ.ಕ ಜಿಲ್ಲಾಧಿಕಾರಿ ದರ್ಶನ್, ಪೋಲೀಸ್ ಕಮೀಷನರ್ ಸುಧೀರ್ ರೆಡ್ಡಿ, ಎಸ್ ಪಿ ಅರುಣ್, ಜಿ.ಪಂ ಸಿ.ಇ.ಒ ವಿನಾಯಕ್, ವಾರ್ತಾಧಿಕಾರಿ ಖಾದರ್ ಶಾ ಮೊದಲಾದವರು ಉಪಸ್ಥಿತರಿದ್ದರು.