ವಿದ್ಯಾಮಾತಾದಲ್ಲಿ ನೆರವೇರಿತು ಸಂಭ್ರಮದ ಶಾರದೋತ್ಸವ

0

ದೃಢ ನಿರ್ಧಾರಗಳು ನಮ್ಮ ಜೀವನದ ಭವಿಷ್ಯವನ್ನು ರೂಪಿಸುತ್ತದೆ – ಪ್ರತಿಭಾ ಕುಳಾಯಿ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕ್ರಾಂತಿಯನ್ನು ಸೃಷ್ಟಿಸಿ ಹಲವಾರು ಅಭ್ಯರ್ಥಿಗಳಿಗೆ ತರಬೇತಿ ನೀಡಿ ಸರಕಾರಿ ಉದ್ಯೋಗ ದಕ್ಕಿಸುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರತೀ ವರ್ಷದಂತೆ ಶಾರದೋತ್ಸವ ನೆರವೇರಿತು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪ್ರಸ್ತುತ ಜಗತ್ತಿನಲ್ಲಿ ಉನ್ನತ ಜೀವನವನ್ನು ರೂಪಿಸಲು ನಾವು ತೆಗೆದುಕೊಳ್ಳುವ ನಿರ್ಧಾರಗಳು ಅತ್ಯಂತ ನಿರ್ಣಾಯಕ ವಾಗಿದೆ ಹಾಗೂ ಸವಾಲುಗಳನ್ನು ಎದುರಿಸಲು ಸದಾ ಸಿದ್ದರಿರಬೇಕು ಎಂದು ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಕಿವಿ ಮಾತುಗಳನ್ನು ತಿಳಿಸಿ ತನ್ನ ಸಾರ್ವಜನಿಕ ಜೀವನದ ಕುರಿತು ತನ್ನ ಅನಿಸಿಕೆಗಳನ್ನು ಹಂಚಿಕೊಂಡು ವಿದ್ಯಾಮಾತಾ ಅಕಾಡೆಮಿಯ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.


ಅತಿಥಿಗಳು ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸ್ಪರ್ಧೆಗಳ ವಿಜೇತರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ತನ್ನ ದಿಟ್ಟತನದಿಂದ ಸಮಾಜಮುಖಿ ಕಾರ್ಯಗಳಿಗೆ ಹೆಸರುವಾಸಿಯಾಗಿರುವ ಪ್ರತಿಭಾ ಕುಳಾಯಿ ರವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.


ಶರನ್ನವರಾತ್ರಿಯ ಸುಸಂದರ್ಭದಲ್ಲಿ ನಡೆದ ಶಾರದೋತ್ಸವದ ಅಂಗವಾಗಿ ಪ್ರಾತಃ ಕಾಲ ಸ್ವಸ್ತಿ ಶ್ರೀ ಪುಣ್ಯಾಹ, ಗಣಪತಿ ಹೋಮ, ನಂತರದಲ್ಲಿ ವಿದ್ಯಾರ್ಥಿಗಳಿಂದ ದೇವರ ಸಂಕೀರ್ತನೆ, ಶಾರದಾ ಪೂಜೆ, ಲಕ್ಷ್ಮೀ ಪೂಜೆ ಹಾಗೂ ಸಾಯಂಕಾಲ ದುರ್ಗಾ ನಮಸ್ಕಾರ ಪೂಜೆ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಈ ಸಂದರ್ಭದಲ್ಲಿ ಖ್ಯಾತ ಗಾಯಕರಾದ ಚಂದ್ರಶೇಖರ ಹೆಗ್ಡೆರವರ ಪುನೀತ್ ಆರ್ಕೆಷ್ಟ್ರ ತಂಡದವರಿಂದ ಸಂಗೀತ ರಸಮಂಜರಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಸ್ವಾಗತಿಸಿ, ಪ್ರಾಸ್ತಾವಿಕ ನೆಲೆಯಲ್ಲಿ ಮಾತನಾಡಿದರು. ವಿದ್ಯಾಮಾತಾ ಅಕಾಡೆಮಿಯ ನಿರ್ದೇಶಕಿ ಹಾಗೂ ತರಬೇತುದಾರೆ ರಮ್ಯ ಭಾಗ್ಯೇಶ್ ರೈರವರು ವಂದನಾರ್ಪಣೆಗೈದರು. ತರಬೇತುದಾರೆ ಚೇತನಾ ಸತೀಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಮಾತಾ ಅಕಾಡೆಮಿಯ ತರಬೇತುದಾರರು, ಸಿಬ್ಬಂದಿ ವರ್ಗ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ, ಅರ್ಹತಾ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿಯಲ್ಲಿರುವ ವಿದ್ಯಾರ್ಥಿಗಳು, ಪೋಷಕರು ಮತ್ತು ವಿದ್ಯಾಮಾತಾ ಅಕಾಡೆಮಿಯ ಹಿತೈಷಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here