ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಸಂಸ್ಥೆಗಳ ವತಿಯಿಂದ ಅ.4, ಶನಿವಾರದಂದು ಅಪರಾಹ್ನ 2.30 ಗಂಟೆಗೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಹೆತ್ತವರ ಹಾಗೂ ಹಿರಿಯ ವಿದ್ಯಾರ್ಥಿಗಳ ಸಭೆ ಕರೆಯಲಾಗಿದೆ. ಅಂಬಿಕಾ ಶಿಕ್ಷಣ ವ್ಯವಸ್ಥೆ ಆರಂಭಗೊಂಡು 25 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಜಿಸಲಾಗುವ ಬೆಳ್ಳಿಹಬ್ಬದ ವೈವಿಧ್ಯಮಯ ಕಾರ್ಯಕ್ರಮಗಳ ಬಗೆಗಿನ ಪೂರ್ವಭಾವಿ ಚರ್ಚೆಗಾಗಿ ಈ ಸಭೆಯನ್ನು ಆಯೋಜಿಸಲಾಗಿದೆ.




ಹಲವು ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಉದ್ಯೋಗಿಗಳಾಗಿರುವುದರಿಂದ ಅವರ ಅನುಕೂಲಕ್ಕಾಗಿ ಅ.11ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸಿ ಮಸಾಲ ಒಳಾಂಗಣ ಸಭಾಭವನದಲ್ಲಿ ಸಂಜೆ 5.30ಕ್ಕೆ ಹಿರಿಯ ವಿದ್ಯಾರ್ಥಿಗಳ ಸಭೆ ಆಯೋಜಿಸಲಾಗಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಭಾಗವಾದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯ, ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳು ಹಾಗೂ ಈ ಹಿಂದೆ ಅಂಬಿಕಾ ವಿದ್ಯಾಲಯ ಕೋಚಿಂಗ್ ಸೆಂಟರ್‌ನಲ್ಲಿ ಅಧ್ಯಯನ ನಡೆಸಿದ್ದ ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗವಹಿಸಿ ಬೆಳ್ಳಿಹಬ್ಬದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಕೋರಲಾಗಿದೆ.