ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಮಹಾತ್ಮಾ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ 2ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಪ್ರದೀಪ್ ಆರ್ ಗೌಡ ಅರುವಗುತ್ತು ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಗಳ ಆದರ್ಶ ಮೌಲ್ಯಗಳು ನಮ್ಮ ಜೀವನಕ್ಕೆ ದಾರಿದೀಪವಾಗಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಾಲೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿಯವರು ಗಾಂಧೀ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯ ದೇವಿಪ್ರಸಾದ್ ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯ ನಾಗೇಶ್ ರೈ ಮಾಳ ಉಪಸ್ಥಿತರಿದ್ದರು. ಎಲ್ಲಾ ಅತಿಥಿಗಳು ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು. ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಸ್ವಾಗತಿಸಿದರು. ಸಹ ಆಡಳಿತಾಧಿಕಾರಿ ಹೇಮಾ ನಾಗೇಶ್ ರೈ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಕುಮಾರ್ , ಶಿಕ್ಷಕಿ ಸುಷ್ಮಾ ಎಚ್ ರೈ ಹಾಗೂ ಶಾಲಾ ಸಿಬ್ಬಂದಿ ಶ್ರೀಧರ್ ಅಗಳಿ ಸಹಕರಿಸಿದರು.