ಉಪ್ಪಿನಂಗಡಿ: ಪುತ್ತೂರು ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಇವರ ಆಶ್ರಯದಲ್ಲಿ ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ ಉಪ್ಪಿನಂಗಡಿ ವಲಯದ ವಾರ್ಷಿಕ ಮಹಾಸಭೆ ಮತ್ತು ಕ್ರೀಡೋತ್ಸವ ಅ.5ರಂದು 34 ನೆಕ್ಕಿಲಾಡಿಯ ಮೈಂದಡ್ಕ ಮೈದಾನದಲ್ಲಿ ನಡೆಯಲಿದೆ.
ಪೂರ್ವಾಹ್ನ 9ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮಧ್ಯಾಹ್ನ 12ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಉಪ್ಪಿನಂಗಡಿ ವಲಯದ ಅಧ್ಯಕ್ಷ ಧರ್ನಪ್ಪ ನಾಯ್ಕ ಬೊಳ್ಳಾವು ಪ್ರಕಟನೆಯಲ್ಲಿ ತಿಳಿಸಿದೆ.