ಪುತ್ತೂರು ದಸರಾ ಮಹೋತ್ಸವದಲ್ಲಿ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ನೃತ್ಯಾರ್ಪಣೆ : ಕಲಾ ಕುಟುಂಬಕ್ಕೆ ಗೌರವ

0


ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿಯಿಂದ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆದ 25ನೇ ವರ್ಷದ ಪುತ್ತೂರು ದಸರಾ ಮಹೋತ್ಸವದಲ್ಲಿ ಅ.1ರಂದು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಶಿಷ್ಯರಿಂದ ನೃತ್ಯಾರ್ಪಣ ಕಾರ್ಯಕ್ರಮ ನಡೆಯಿತು.


ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯನಿರ್ದೇಶಕ ವಿದ್ವಾನ್ ಬಿ ದೀಪಕ್ ಕುಮಾರ್, ವಿದುಷಿ ಪ್ರೀತಿಕಲಾ, ವಿದ್ವಾನ್ ಗಿರೀಶ್ ಮತ್ತು ಸಂಸ್ಥೆಯ ಸಂಚಾಲಕಿ ಶಶಿಪ್ರಭಾರನ್ನು ಪುತ್ತೂರು ದಸರಾ ಮಹತ್ಸೋವ ಸಮಿತಿ ಸಂಚಾಲಕ ಕೆ ಪ್ರೀತಂ ಪುತ್ತೂರಾಯ, ಸಹ ಸಂಚಾಲಕ ಜಯಂತ ಶೆಟ್ಟಿ ಕಂಬಳತ್ತಡ್ಡ, ಸಾಂಸ್ಕೃತಿಕ ಕಾರ್ಯಕ್ರಮದ ಸಂಚಾಲಕ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ, ಸದಸ್ಯ ಉದಯ ಕುಮಾರ್ ರೈ ಎಸ್ ಅವರು ಸನ್ಮಾನಿಸಿದರು. ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭರತನಾಟ್ಯ ಪ್ರದರ್ಶನಗೊಂಡಿತು.

LEAVE A REPLY

Please enter your comment!
Please enter your name here