ಪುತ್ತೂರು: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರೌಢ ಶಾಲೆ ಹೆಸ್ಕುತ್ತೂರು ಬ್ರಹ್ಮಾವರ ಇವರ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ 17ರ ವಯೋಮಾನದ ಕ್ರಿಕೆಟ್ ಪಂದ್ಯಾಟದಲ್ಲಿ ಸುದಾನ ಶಾಲೆಯ ವಿದ್ಯಾರ್ಥಿಗಳಾದ ಮನೀಶ್ ಯು ಶೆಟ್ಟಿ (10ನೇ) ,ಹಿಶಾಮ್ ಶೇಕ್ (10ನೇ) ಹಾಗೂ ಸಂಭ್ರಮ್ ಶೆಟ್ಟಿ (8ನೇ) ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಈ ಪಂದ್ಯಾಟದ ಉತ್ತಮ ಎಸೆತಗಾರ ಪ್ರಶಸ್ತಿಯನ್ನು ಸಂಭ್ರಮ್ ಶೆಟ್ಟಿ ಪಡೆದುಕೊಂಡರು. ಮನೀಶ್ ಯು ಶೆಟ್ಟಿ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಸುದಾನ ಶಾಲಾ ಸಂಚಾಲಕರಾದ ರೆ.ವಿಜಯ ಹಾರ್ವಿನ್, ಶಾಲಾ ಮುಖ್ಯಶಿಕ್ಷಕಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪರಾಜ್, ಲೀಲಾವತಿ, ಜೀವಿತ ಎನ್ ಕೆ ಅಭಿನಂದಿಸಿ ಶುಭ ಹಾರೈಸಿದರು. ಇವರು ಕಿರಣ್ ಕುಮಾರ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ರಿಂದ ಸುದಾನ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದಿರುತ್ತಾರೆ.
