ಚಾರ್ವಾಕ ಪ್ರಾ. ಕೃ. ಪ. ಸ. ಸಂಘ ದಿಂದ ಸಹಾಯಧನ ಹಸ್ತಾಂತರ
ಕಾಣಿಯೂರು: ಚಾರ್ವಾಕ ಕೊರಿಯಾನ ಬ್ರಹ್ಮಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದ ಜೀರ್ಣೋದ್ಧಾರದ ಕಾರ್ಯಕ್ಕಾಗಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ರೂ 25,000 ರೂಪಾಯಿ ದೇಣಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಅರುವಗುತ್ತು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಇಡ್ಯಡ್ಕ, ಗರಡಿಯ ಸೇವಾ ಟ್ರಸ್ಟ್ ನ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ಟ್ರಸ್ಟಿನ ಉಪಾಧ್ಯಕ್ಷ ವಸಂತ ದಲಾರಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ, ಸಂಘದ ನಿರ್ದೇಶಕರಾದ ಪರಮೇಶ್ವರ ಅನಿಲ, ಸುಂದರ ದೇವಸ್ಯ, ಟ್ರಸ್ಟಿನ ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಪಾಡಿಗುತ್ತು, ಸ್ವಯಂಸೇವಕ ಸಮಿತಿ ಅಧ್ಯಕ್ಷ ನಂದನ್ ಕಜೆ, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.