ಕಾಣಿಯೂರು: ದೇಶದ ಸ್ವಾತಂತ್ರ್ಯಕ್ಕಾಗಿ ಅಹಿಂಸಾ ಮಾರ್ಗದ ಮೂಲಕ ಹೋರಾಟ ಮಾಡಿದ ಮಹಾತ್ಮ ಗಾಂಧೀಜಿಯವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ ಹೇಳಿದರು.

ಅವರು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬೀರ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ರಚನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನೂತನವಾಗಿ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ರಚನೆಯನ್ನು ಮಾಡಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದಿನೇಶ್ ಅಬೀರ, ಕಾರ್ಯದರ್ಶಿಯಾಗಿ ಮೋಹಿತ್ ಕಾಯೆರ್ತಡಿ ಆಯ್ಕೆಯಾದರು. ಸದಸ್ಯರುಗಳಾಗಿ ಮನೀಶ್ ಅಬೀರ, ಧನುಷ್, ಗಗನ್, ರವಿಕಿರಣ್, ಯೋಗೀಶ್ ಕರೆಮನೆ, ಲಿಖಿತ್ ಅಜಿರಂಗಳ , ಕೌಶಿಕ್ ಬರೆಮೇಲು, ಇಸ್ಮಾಯಿಲ್ ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಮಾದೋಡಿ, ಗೆಳೆಯರ ಬಳಗ ಕೊಡಿಮಾರು ಅಬೀರ ಇದರ ಅಧ್ಯಕ್ಷ ಬಾಲಚಂದ್ರ ಅಬೀರ, ಬಾಲವಿಕಾಸ ಸಮಿತಿಯ ಸದಸ್ಯೆ ಹೇಮಲತಾ ಬರೆಮೇಲು, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.ಅಂಗನವಾಡಿ ಕಾರ್ಯಕರ್ತೆ ಬೇಬಿ ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ವಾರಿಜ ಸಹಕರಿಸಿದರು.