ಪುತ್ತೂರು: ಸಮಸ್ತ ಕೇರಳ ಜಂಇಯತುಲ್ ಉಲಮಾದ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಅವರು ಅ.4ರಂದು ಸಂಪ್ಯ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಚೇರ್ಮನ್ ಡಾ.ಅಶ್ರಫ್ ಎಸ್ ಕಮ್ಮಾಡಿ, ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಎಲ್ ಟಿ ಅಬ್ದುಲ್ ರಝಾಕ್ ಹಾಜಿ, ಪುತ್ತೂರು ಸಮಸ್ತ ಜಂಇಯ್ಯತುಲ್ ಮುಅಲ್ಲಿಮೀನ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಫೈಝಿ ಸಂಪ್ಯ, ನಿಸಾರ್ ಸಂಪ್ಯ, ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ರಝಾಕ್ ಸಾಲ್ಮರ ಹಾಗು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
