ನಿಡ್ಪಳ್ಳಿ; ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಕರ್ನಪ್ಪಾಡಿ ನಿಡ್ಪಳ್ಳಿ ಇಲ್ಲಿಯ ಕೊಡಮಣಿತ್ತಾಯ ದೈವದ ನೂತನ ದೈವಸ್ಥಾನ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಅ.6ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಜರಗಲಿದೆ.
ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೋಶಾಧಿಕಾರಿ ಪದ್ಮರಾಜ್ ಆರ್ ಶಂಕುಸ್ಥಾಪನೆ ನೆರವೇರಿಸಲಿರುವರು. ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಅಧ್ಯಕ್ಷ ಶಿವಪ್ಪ ಪೂಜಾರಿ ನುಳಿಯಾಲು ಅಧ್ಯಕ್ಷತೆ ವಹಿಸಲಿದ್ದಾರೆ.ಅಲ್ಲದೆ ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಸೇವಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.