ಪುತ್ತೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಮೊಟ್ಟೆತ್ತಡ್ಕ ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸೆ.22 ರಿಂದ ಅ.1ರವರೆಗೆ ಸಾರ್ವಜನಿಕ ನವರಾತ್ರಿ ಉತ್ಸವವು ನಡೆದು ಸಂಪನ್ನಗೊಂಡಿದೆ.

ಸೆ.22 ರಂದು ಬೆಳಿಗ್ಗೆ ಮಹಾ ಗಣಪತಿ ಹೋಮ, ಸೆ.22 ರಿಂದ ಅ.1ರವರೆಗೆ ಪ್ರತಿದಿನ ಸಂಜೆ ಭಜನಾ ಸಂಕೀರ್ತನೆ ಬಳಿಕ ಮಹಾಪೂಜೆ ನೆರವೇರಿತು. ಅ.2ರಂದು ಬೆಳಿಗ್ಗೆ ಅಕ್ಷರಾಭ್ಯಾಸ, ವಿಜಯದಶಮಿ ಪೂಜೆ, ಪ್ರಸಾದ ವಿತರಣೆ, ನವಾನ್ನ ಭೋಜನ ಜರಗಿತು. ಹಬ್ಬದ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ಯುವ ಬಳಗ ಮೊಟ್ಟೆತ್ತಡ್ಕ ಇವರಿಂದ ಪ್ರಥಮ ಬಾರಿಗೆ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ಸೆ.28 ರಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ನೆರವೇರಿತು.
ಈ ಶ್ರದ್ಧಾ ಭಕ್ತಿಯ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಮೇಶ್ ರೈ ಮಿಶನ್ ಮೂಲೆ, ಅಧ್ಯಕ್ಷ ರಾಮ ಶೆಟ್ಟಿ, ಲೆಕ್ಕ ಪರಿಶೋಧಕ ವಿಶ್ವನಾಥ ರೈ ಮಿಶನ್ ಮೂಲೆ, ಕಾರ್ಯದರ್ಶಿ ಕೆ.ಬಿ ಶೇಖರ, ಉಪಾಧ್ಯಕ್ಷರಾದ ಸಂತೋಷ್ ಕುಮಾರ್, ಸತೀಶ್ ಎಂ, ಜೊತೆ ಕಾರ್ಯದರ್ಶಿಗಳಾದ ಲಕ್ಷ್ಮಣ ಶೆಟ್ಟಿ, ಸಂತೋಷ್ ರೈ, ಸುಂದರ ಕೆ, ಕೋಶಾಧಿಕಾರಿ ಮೋಹನ್ ಕುಮಾರ್ ಡಿ. ಸಹಿತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.