ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ‘ಅಶೋಕ ಜನ ಮನ’ ಕಾರ್ಯುಕ್ರಮಕ್ಕೆ ಚಪ್ಪರ ಮೂಹರ್ತ ಅ.5ರಂದು ನೆರವೇರಿತು.
ಚಪ್ಪರ ಮುಹೂರ್ತ ನೆರವೇರಿದ ಬಳಿಕ ಕಾರ್ಯಕ್ರಮದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಒಂದು ಲಕ್ಷ ಜನರಿಗೆ ಅನ್ನಸಂತರ್ಪಣೆ ಹಾಗೂ ವಸ್ತ್ರ ವಿತರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯು.ಟಿ ಖಾದರ್ ಸೇರಿದಂತೆ ವಿವಿಧ ಗಣ್ಯರು ಆಗಮಿಸಲಿದ್ದಾರೆ.
20 ಕೌಟರ್ ಊಟ, 20ರಿಂದ 30 ಕೌಂಟರ್‌ಗಳಲ್ಲಿ ವಸ್ತ್ರ ವಿತರಣೆ, 50 ಮಂದಿಯಿಂದ ಏಕಕಾಲದಲ್ಲಿ ಲೈವ್ ದೋಸೆ ಸಿದ್ದಪಡಿಸುವ ವ್ಯವಸ್ಥೆಯಿದೆ. ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ ಪ್ರತ್ಯೇಕ ಕೌಂಟರ್ ಮಾಡಲಾಗುವುದು. 1500ಕ್ಕಿಂತ ಅಧಿಕ ಮಂದಿ ಕಾರ್ಯಕರ್ತರು ಕಾರ್ಯಕ್ರಮ ಯಶಸ್ಸಿಗೆ ಕೈ ಜೋಡಿಸಲಿದ್ದಾರೆ. ಎಲ್ಲಾ ಗ್ರಾಮಗಳಲ್ಲಿಯೂ ಸಭೆ ನಡೆಸಲಾಗಿದೆ. ಬರುವವರಿಗೆ ಯಾವುದೇ ವಾಹನ ವ್ಯವಸ್ಥೆಯಿಲ್ಲ. ಸ್ವ ಇಚ್ಚೆಯಿಂದ ಜನರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಕ್ರೀಡಾಂಗಣದಲ್ಲಿ ಪೂರ್ಣ ಪೆಂಡಾಲ್ ಅಳವಡಿಸಲಾಗುವುದು ಇದರಲ್ಲಿ ಶೇ.50ರಷ್ಟು ಭಾಗದಲ್ಲಿ ಜರ್ಮನ್ ಟೆಂಟ್ ಹಾಗೂ ಮಳೆಯಿಂದ ರಕ್ಷಣೆ ಪಡೆಯಲು ಶೀಟ್ ಅಳವಡಿಸುವ ಮೂಲಕ ವ್ಯವಸ್ಥಿತವಾಗಿ ಮಾಡಲಾಗುವುದು ಎಂದು ತಿಳಿಸಿದರು.
ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಜನ ಸಾಮಾನ್ಯರ ನಾಡಿ ಮಿಡಿತ ಅಶೋಕ ಜನಮನ ಕಾರ್ಯಕ್ರಮದ ವಿಜೃಂಭನೆಯಿಂದ ನಡೆಯಲಿದೆ. ಒಂದು ಲಕ್ಷಕ್ಕಿಂತ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಸುಮಾರು ಒಂದು ಸಾವಿರಕ್ಕೂ ಅಧಿಕ ಮಂದಿ ಯಾವುದೇ ಫಲಾಪೇಕ್ಷೆಯಿಲ್ಲದೆ ಅಶೋಕ್ ರೈಯವರ ಮೇಲಿನ ಪ್ರೀತಿಯಿಂದ ಸ್ವಯಂ ಸೇವಕರಾಗಿ ದುಡಿಯಲಿದ್ದಾರೆ. ಕಾರ್ಯಕ್ರಮದಲ್ಲಿ ಗೂಡ ದೀಪ ಸ್ಪರ್ಧೆಯು ನಡೆಯಲಿದೆ. ವಿಶೇಷವಾಗಿ ದೋಸೆ ಕ್ಯಾಂಪ್ ನಡೆಯಲಿದೆ. ಕಳೆದ ಬಾರಿ 70-80 ಮಂದಿಗೆ ವಸ್ತ್ರ ವಿತರಿಸಲಾಗಿದೆ. ಈ ಬಾರಿ ಒಂದು ಲಕ್ಷಕ್ಕಿಂತ ಅಧಿಕ ಮಂದಿ ಬಂದರೂ ವಿತರಣೆ ವ್ಯವಸ್ಥೆಯಿದೆ ಎಂದು ಹೇಳಿದರು.
ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಶಾಸಕ ಅಶೋಕ್ ಕುಮಾರ್ ರೈಯವರ ಮನೆಯವರು ಪ್ರತಿ ವರ್ಷ ದೀಪಾಳಿಗೆ ಹಿರಿಯ ಕಾಲದಿಂದಲೂ ವಿತರಿಸುತ್ತಿದ್ದಾರೆ. ಅದು ಈಗ ಅಕ್ಷಯವಾಗಿ ನಡೆಯುತ್ತಿದ್ದು, ಮಹಾಲಿಂಗೇಶ್ವರ ದೇವರ ಮಣ್ಣಲ್ಲಿ ಒಂದು ಲಕ್ಷಕ್ಕಿಂತಲೂ ಅಧಿಕ ಮಂದಿ ಬಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಇಡೀ ರಾಜ್ಯವೇ ತಿರುಗಿ ನೋಡುವಂತೆ ವ್ಯವಸ್ಥಿತವಾಗಿ ನಡೆದು ಜಾತ್ಯಾತೀತ ಹಾಗೂ ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸುವ ಮೂಲಕ ಯಶಸ್ವಿಯಾಗಿ ನಡೆಯಲಿದೆ ಎಂದರು.
ಸುಮಾ ಅಶೋಕ್ ಕುಮಾರ್ ರೈ ಮಾತನಾಡಿ, ದೀಪಾವಳಿಗೆ ಪ್ರತಿವರ್ಷದಂತೆ ಈ ವರ್ಷವೂ ವಸ್ತ್ರ ವಿತರಣೆಯ ಅಶೋಕ ಜನ ಮನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ಮಾತನಾಡಿ, ಪುತ್ತೂರಿನ ಮಾಣಿಕ್ಯದಂತಿರುವ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ದೀಪಾವಳಿಗೆ ನಡೆಯುವ ಅಶೋಕ ಜನಮನ ಕಾರ್ಯಕ್ರಮದಲ್ಲಿ ಯಾವುದೇ ಪಕ್ಷ, ಜಾತಿ, ಮತ ಯಾವುದೇ ಬೇಧವಿಲ್ಲದೇ ಎಲ್ಲರೂ ಬಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸುವಂತೆ ಅವರು ವಿನಂತಿಸಿದರು.
ನಗರ ಯೋಜನಾ ಪ್ರಾಧೀಕಾರದ ಸದಸ್ಯರಾದ ನಿಹಾಲ್ ಶೆಟ್ಟಿ, ಲ್ಯಾನ್ಸಿ ಮಸ್ಕರೇನಸ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಉದ್ಯಮಿ ಶಿವರಾಮ ಆಳ್ವ, ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಕಾವು, ಕೆಯ್ಯೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ ಜಯರಾಮ ರೈ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮೋನಪ್ಪ ಪೂಜಾರಿ ಕೆರೆಮಾರು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎ.ಎಂ ಪ್ರವೀಣಚಂದ್ರ ಆಳ್ವ, ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾೖಕ್ , ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಶಿವಪ್ರಸಾದ್ ಮಠಂತಬೆಟ್ಟು, ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಭಿಲಾಷ್ ರೈ ಬಂಗಾರಡ್ಕ, ಕೋಡಿಂಬಾಡಿ ಗ್ರಾ.ಪಂ ಅಧ್ಯಕ್ಷ ಮಲ್ಲಿಕಾ ಅಶೋಕ್ ಪೂಜಾರಿ, ನರಿಮೊಗರು ಗ್ರಾ.ಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ ಮುಕ್ವೆ, ಆರ್ಯಾಪು ಗ್ರಾ.ಪಂ ಸದಸ್ಯ ಪವಿತ್ರ ರೈ, ಯೋಗೀಶ್ ಸಾಮಾನಿ, ರಂಜಿತ್ ಬಂಗೇರ, ಕೃಷ್ಣಪ್ರಸಾದ್, ನಯನಾ ರೈ ಸಹಿತ ಹಲವು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.