
ಪುತ್ತೂರು: ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಇದರ ಸುಬ್ರಹ್ಮಣ್ಯ ಶಾಖೆಯ ವಿದ್ಯಾರ್ಥಿಗಳಿಂದ ‘ನೃತ್ಯೋಹಂ’ ಭರತನಾಟ್ಯ ವಾರ್ಷಿಕ ಕಾರ್ಯಕ್ರಮ ಸುಬ್ರಹ್ಮಣ್ಯ
ಮಠಾಧೀಶ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಸುಬ್ರಹ್ಮಣ್ಯ ಶ್ರೀವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಸಾಂಸ್ಕೃತಿಕ ವೇದಿಕೆಯಲ್ಲಿ ಇತ್ತೀಚೆಗೆ ನಡೆಯಿತು.
ಅಕಾಡೆಮಿಯ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಿದರು. ಶ್ರೀಸುಬ್ರಹ್ಮಣ್ಯ ಮಠದ ದಿವಾನ ಸುದರ್ಶನ ಜೋಯಿಸರು ವಿದ್ಯಾರ್ಥಿಗಳಿಗೆ ಶ್ರೀದೇವರ ಪ್ರಸಾದ ನೀಡಿ ಹರಸಿದರು.
ಕೃಪಾ ಜೋಯಿಸರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಹಿಮ್ಮೇಳದಲ್ಲಿ ನಟುವಾಂಗ ವಿದುಷಿ ಶಾಲಿನಿ ಆತ್ಮಭೂಷಣ್, ಹಾಡುಗಾರಿಕೆ ವಿದ್ವಾನ್ ಕೃಷ್ಣಾಚಾರ್
ಪಾಣೆಮಂಗಳೂರು, ಮೃದಂಗದಲ್ಲಿ ವಿದ್ವಾನ್ ಬಾಲಕೃಷ್ಣ ಹೊಸಮನೆ, ಕೊಳಲಿನಲ್ಲಿ ಮೇಧಾ ಉಡುಪ ಮಂಗಳೂರು ಸಹಕರಿಸಿದರು. ಶಿಕ್ಷಕ ಶಶಿಕಾಂತ್ ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.