ಕಡಬ: ಕಡಬ ಮೆಸ್ಕಾಂನಲ್ಲಿ ಕಿರಿಯ ಇಂಜಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ್ ಕುಮಾರ್ ಟಿ.ಎಂ ಅವರು ಹಾಸನಕ್ಕೆ ವರ್ಗಾವಣೆಗೊಂಡಿದ್ದಾರೆ.
2007ರಲ್ಲಿ ಮೆಸ್ಕಾಂನಲ್ಲಿ ಕರ್ತವ್ಯಕ್ಕೆ ಸೇರಿದ ವಸಂತ್ ಕುಮಾರ್ ಟಿ.ಎಂ ಅವರು 2022ರಲ್ಲಿ ಕಡಬ ಮೆಸ್ಕಾಂನಲ್ಲಿ ಕಿರಿಯ ಇಂಜಿನಿಯರ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಮೂರು ವರ್ಷ ಕಡಬದಲ್ಲಿ ಸೇವೆ ಸಲ್ಲಿಸಿರುವ ಅವರು ಆ ಪೈಕಿ ಹೆಚ್ಚುವರಿಯಾಗಿ ಒಂದು ವರ್ಷ ಮೂರು ತಿಂಗಳು ಬಿಳಿನೆಲೆಯಲ್ಲಿ ಪ್ರಭಾರ ಶಾಖಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ವರ್ಗಾವಣೆಗೊಂಡಿರುವ ಅವರು ಹಾಸನ ಚಾಮುಂಡೇಶ್ವರಿ ವಿದ್ಯುತ್ ಕಂಪೆನಿಯ ಕ.ವಿ.ಪ್ರ.ನಿ.ನಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಹೋಬಳಿಯ ತಡಗವಾಡಿ ನಿವಾಸಿಯಾಗಿರುವ ವಸಂತ ಕುಮಾರ್ ಟಿ.ಎಂ ಕಡಬದಲ್ಲಿ ತನ್ನ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ವಿದ್ಯುತ್ ಬಳಕೆದಾರರಿಗೆ ತಕ್ಷಣ ಸ್ಪಂದಿಸುವ ಮೂಲಕ ಜನಮೆಚ್ಚಿದ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.
ವರ್ಗಾವಣೆಗೊಂಡ ವಸಂತ್ ಕುಮಾರ್ ಟಿ.ಎಂ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಕಡಬ ಮೆಸ್ಕಾಂ ಕೇಂದ್ರದಲ್ಲಿ ನಡೆಯಿತು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್, ಸಹಾಯಕ ಇಂಜಿನಿಯರ್ ಸತ್ಯನಾರಾಯಣ ಸಿ.ಕೆ, ಸಹಾಯಕ ಲೆಕ್ಕಾಧಿಕಾರಿ ಕೃಷ್ಣಮೂರ್ತಿ, ಆಲಂಕಾರು ಶಾಖಾಧಿಕಾರಿ ಪ್ರೇಮಕುಮಾರ್, ನೆಲ್ಯಾಡಿ ಶಾಖಾಧಿಕಾರಿ ರಾಮಣ್ಣ, ಬಿಳಿನೆಲೆ ಶಾಖಾಧಿಕಾರಿ ಪ್ರಶಾಂತ್ ಬಿಳಿನೆಲೆ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.